ಬೆಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.
ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್, ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಆಟೋ ಡಿಕ್ಕಿ ಹೊಡೆದಿದೆ. ಆತ ಕೆಳಗೆ ಬೀಳುತ್ತಿದ್ದಂತೆಯೇ, ಐವರು ದುಷ್ಕರ್ಮಿಗಳ ತಂಡ ಲಾಂಗು – ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಮೀನು ವಿಚಾರಕ್ಕೆ ವೆಂಕಟೇಶ್ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಪಿ ದೇವರಾಜ್, ಆವಲಹಳ್ಳಿ ಮತ್ತು ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.










