ಬೆಂಗಳೂರು : ಕೊರೊನಾ ಸಾಂಕ್ರಾಮಿಕದ ಹಿನ್ನಲೆ ನಗರದಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಔಷಧ ಅಂಗಡಿ, ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.










