ಬೆಂಗಳೂರು: ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಸಿ.ಎಂ.ಸಿದ್ದರಾಮಯ್ಯ ಇಂದು ಘಟನಾ ಸ್ಥಳಕ್ಕೆ ಭೇಟಿ ಮಾಡಿ, ಈ ಕಟ್ಟಡ ಕುಸಿತದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿ ನಂತರ ಕಟ್ಟಡ ಕುಟುಂಬದಲ್ಲಿ ಮೃತಪಟ್ಟ ಪ್ರತಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವಾಗಿ ಘೋಷಣೆ ಮಾಡಿದ್ದಾರೆ.
ಬಾಬುಸಾಬ್ ಪಾಳ್ಯದ ಕಟ್ಟದ ಕುಸಿತದ ಘಟನಾ ಸ್ಥಳಕ್ಕೆ ಇಂದು ಸಿಎಂ.ಸಿದ್ದರಾಮಯ್ಯ ಭೇಟಿ ನೀಡಿ ಘಟನೆಯ ಬಗ್ಗೆ ವಿಚಾರಿದ ನಂತರ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಅವರು ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಆರು ಮಂದಿ ಕಾರ್ಮಿಕರಿಗೆ ಗಾಯಗಳಾಗಿವೆ ಅವರ ಚಿಕಿತ್ಸೆಗೆ ತಗಲುವ ಖರ್ಚು ಸರ್ಕಾರ ನೋಡಿಕೊಳ್ಳುತ್ತದೆ. ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದರು.
ಅನಧಿಕೃತವಾಗಿ ಕಟ್ಟಡ ಕಟ್ಟಬಾರದೆಂದು ಕಟ್ಟಡ ಕಾರ್ಮಿಕರಿಗೆ ನೋಟಿಸು ಕೊಟ್ಟಿದ್ದರೂ ಅದನ್ನು ಲೆಕ್ಕಿಸದೇ ಕಟ್ಟಡ ಕಟ್ಟಿದ್ದಾರೆ. ಜೋನ್ ನ ಐಎಎಸ್ ಅಫೀಸ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ನೋಟೀಸ್ ಕೊಡಲು ಹೇಳಲಾಗಿದೆ. ಕಾನೂನು ಪ್ರಕಾರ ಮನೆ ಕಟ್ಟಬೇಕು ಎಂದು ಜನರಿಗೆ ಸಿಎಂ ಮನವಿ ಮಾಡಿದರು. ಈ ಕಟ್ಟಡವನು ಕಳಪೆ ಕಾಮಗಾರಿಯಿಂದ ಈ ಕಟ್ಟಿದ್ದಾರೆ ಹಾಗಾಗಿ ಈ ಕಟ್ಟಡ ಬಿದ್ದಿದೆ. ಇದಕ್ಕೆಲ್ಲಾ ಅಧಿಕಾರಿಗಳು ಹೊಣೆ ಹಾಗಾಗಿ ಇದರ ಬಗ್ಗೆ ಕ್ರಮ ಕೈಗೊಳ್ಳಲು ಕಮಿಷನರ್‌ಗೆ ಸೂಚನೆ ಕೊಟ್ಟಿದ್ದೇನೆ ಎಂದರು.










