ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ…

60
firstsuddi

ಬೆಂಗಳೂರು : ನಗರದಲ್ಲಿ ಮತ್ತೊಂದು ಮೂರು ಅಂತಸ್ತಿತ ಕಟ್ಟಡ ಕುಸಿದಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ನಲ್ಲಿರುವ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದ್ದು, ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಕೆಎಂಎಫ್ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಓಡಿ ಬಂದಿದ್ದಾರೆ.

ನಿನ್ನೆಯಷ್ಟೇ ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದಿತ್ತು.