ಬೆಂಗಳೂರಿನಲ್ಲಿ ಯಶ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ ನಟಿ ನಯನತಾರಾ.

55

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಮಾಡಲಾಗುತ್ತಿದೆ. ಯಶ್ ಟಾಕ್ಸಿಕ್ ಸಿನಿಮಾದ ಶೂಟಿಂಗ್‍ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ನಂತರ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಮುಖ್ಯವಾಗಿ ಪರಭಾಷೆಯ ಸ್ಟಾರ್ ನಟಿಯರು ಈ ಸಿನಿಮಾದಲ್ಲಿದ್ದಾರೆ. ಈ ಚಿತ್ರಕ್ಕಾಗಿ ಸ್ಟಾರ್ ನಟಿ ನಯನತಾರಾ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್‍ದಾಸ್ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಬೆಂಗಳೂರಿನ ಹೆಚ್‍ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿರುವ ಚಿತ್ರೀಕರಣಕ್ಕೆ ನಯನತಾರಾ, ಕಿಯಾರಾ, ತಾರಾ ಸುತಾರಿಯಾ, ಹುಮಾ ಖುರೇಶಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.