ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ – ನಾಲ್ವರ ಬಂಧನ…

82
firstsuddi

ಬೆಂಗಳೂರು : ಪಾರ್ಕ್ ನಲ್ಲಿ ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಯುವತಿಯನ್ನ ನಾಲ್ವರು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾರ್ಚ್ 25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನ ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಮಾಡಿದ್ದಾರೆ.

ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾ.26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನ ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.

ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಪೊಲೀಸರು ಇದೀಗ ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.