ಬೆಂಗಳೂರಿನಲ್ಲಿ ವರುಣನ ಆರ್ಭಟ ; ಮನೆಗಳಿಗೆ ನುಗ್ಗಿದ ನೀರು…

62
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ.

ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಗುಡುಗು, ಗಾಳಿ ಸಮೇತ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಶಾಂತಿ ನಗರ ಮುಖ್ಯರಸ್ತೆಯಲ್ಲಿ 5ಕ್ಕೂ ಹೆಚ್ಚು ಕಾರು, 15ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ ಆಟೋಗಳು ಕೆಟ್ಟು ನಿಂತವು. ನೀರಿನಿಂದ ವಾಹನಗಳನ್ನು ಹೊರತರಲು ಪರದಾಡಿದರು. ನಗರದ ಹಲವೆಡೆ ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.