ಬೆಂಗಳೂರಿನ 6 ಶಾಲೆಗಳಿಗೆ ಬಾಂಬ್ ಬೆದರಿಕೆ…

66
firstsuddi

ಬೆಂಗಳೂರು : ನಗರದ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಇ-ಮೇಲ್ ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅನಾಮಿಕ ಹೆಸರಿನಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಹುಸ್ಕೂರು ಬಳಿ ಇರುವ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್, ಹೆಣ್ಣೂರಿನ ವಿನ್ಸೆಂಟ್ ಪಲ್ಲೋಟಿ ಶಾಲೆ ಸೇರಿದಂತೆ 6 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಬೆನ್ನಲ್ಲೇ ಶಾಲೆಗಳಿಂದ ಸಿಬ್ಬಂದಿ ಹೊರ ಬಂದಿದ್ದಾರೆ. ಇನ್ನು ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿ, ಪರಿಶೀಲಿಸುತ್ತಿವೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ನಗರದ ನಾಲ್ಕು ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ  ಎಂದು ತಿಳಿಸಿದ್ದಾರೆ.