ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ…

43
firstsuddi

ಬೆಂಗಳೂರು: ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ನಿನ್ನೆ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ.

ನಿನ್ನೆ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್​​ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.