ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ…

13
firstsuddi

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ಶಂಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ದಿವ್ಯಶ್ರೀ ಗ್ರೂಪ್, ರೇವಾ ಯೂನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿ ನಡೆದಿದೆ. ಸುಮಾರು 45ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.