ಬೆಂಗಳೂರು:ಜೂ21ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದಿನ ಆದೇಶದವರೆಗೆ ಮುಂದೂಡಿಕೆ.

144
firstsuddi

ಬೆಂಗಳೂರು:ಜೂನ್21ರಿಂದ ಪ್ರಾರಂಭವಾಗಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.