ಬೆಂಗಳೂರು : ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ; ಇಬ್ಬರು ಸಾವು…

91
firstsuddi

ಬೆಂಗಳೂರು : ಮಾಗಡಿ ರಸ್ತೆಯಲ್ಲಿರುವ ಎಂ.ಎಂ. ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಬಿಹಾರ ಮೂಲದ ಮನೀಶ್ ಹಾಗೂ ಸೌರಬ್ ಇಬ್ಬರು ಮೃತಪಟ್ಟಿದ್ದಾರೆ.

ಮಧ್ಯಾಹ್ನ 1.30ರ ಸುಮಾರಿಗೆ ಬಾಯ್ಲರ್ ಸ್ಫೋಟಗೊಂಡಿದೆ. ಈ ವೇಳೆ 7 ಮಂದಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಫ್ಯಾಕ್ಟರಿ ಮಾಲೀಕ ಹಾಗೂ ಪಾರ್ಟನರ್ ಆಗಿದ್ದ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಡಿಸಿಪಿ ಸಂಜೀವ್ ಪಾಟೀಲ್ ಕೂಡ ಭೇಟಿ ಕೊಟ್ಟಿದ್ದಾರೆ.