ಬೆಂಗಳೂರು : ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ…

50
firstsuddi

ಬೆಂಗಳೂರು : ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿ.ವಿ.ಪುರಂನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ.

ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ವಾಣಿ(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯಾಗಿದ್ದ ವಾಣಿ ಇಂದು ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿ ವಾಣಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.