ಬೆಂಗಳೂರು : ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್ ಸಂಪೂರ್ಣ ಜಲಾವೃತ – ದೋಣಿ, ಟ್ರ್ಯಾಕ್ಟರ್ ಮೂಲಕ ನಿವಾಸಿಗಳ ಸ್ಥಳಾಂತರ…

72
firstsuddi

ಬೆಂಗಳೂರು : ನಗರದಲ್ಲಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಕಳೆದ ರಾತ್ರಿ ಯಲಹಂಕದಲ್ಲಿ ಸುರಿದ ಭಾರಿ ಮಳೆಯಿಂದ ಯಲಹಂಕ ಕೆರೆ ಕೋಡಿ ಬಿದ್ದಿದೆ. ಕೆರೆಯ ನೀರು ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್​​ಗೆ  ನುಗ್ಗಿದ್ದು ಸಂಪೂರ್ಣವಾಗಿ ಜಲಾವೃತವಾಗಿದೆ.

ಅಪಾರ್ಟ್‌ಮೆಂಟ್ ನಲ್ಲಿ 4 ರಿಂದ 5 ಅಡಿ ನೀರು ನಿಂತಿದ್ದು, ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಪಾರ್ಟ್‌ಮೆಂಟ್ ನಲ್ಲಿ 3 ಸಾವಿರಕ್ಕೂ ಹೆಚ್ಚು ನಿವಾಸಿಗಳಿದ್ದು, ಸದ್ಯ ದೋಣಿ ಹಾಗೂ ಟ್ರ್ಯಾಕ್ಟರ್ ಗಳ ಮೂಲಕ ಅಪಾರ್ಟ್‌ಮೆಂಟ್ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ನೀರಿನ ಜೊತೆಯಲ್ಲಿ ಕೇಂದ್ರಿಯ ವಿಹಾರಕ್ಕೆ ಹಾವು, ಚೇಳುಗಳ ಆಗಮನವಾಗಿದ್ದು, ಹಾವುಗಳ ಕಾಟದಿಂದಾಗಿ ನೀರಿನಲ್ಲಿ ಬರುವುದಕ್ಕೂ ನಿವಾಸಿಗಳು ಭಯ ಪಡುತ್ತಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ತಹಸೀಲ್ದಾರ್ ನಾರಾಯಣಸ್ವಾಮಿ ಸೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.