ಬೆಂಗಳೂರು: ಕೇವಲ 20 ರೂಗಾಗಿ ಬಾರ್ ಕ್ಯಾಷಿಯರ್‌ಗೆ ಚಾಕು ಇರಿದ ಕಿಡಿಗೇಡಿಗಳು.

41

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಡೆಡ್ಲಿ ಮರ್ಡರ್ ಅಟ್ಯಾಕ್ ನಡೆದಿದೆ. ಕೇವಲ 20 ರೂಪಾಯಿಗೆ ಕಿಡಿಗೇಡಿಗಳು ಚಾಕು ಇರಿದಿದ್ದಾರೆ. ವಿದ್ಯಾರಣ್ಯಪುರದ ಬಾರ್‌ನಲ್ಲಿ ಘಟನೆ ನಡೆದಿದ್ದು ಬಾರ್ ಕ್ಯಾಷಿಯರ್‌ಗೆ ಚಾಕು ಇರಿದ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗು ಕಾರ್ತಿಕ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ವಿದ್ಯಾರಣ್ಯಪುರ ನರಸೀಪುರದ ಜಯಶ್ರೀ ಬಾರ್‌ನಲ್ಲಿ ಕುಡಿಯಲು ಬಂದಿದ್ದ ಚೇತನ್, ಕಾರ್ತಿಕ್ ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಮೂವರು ಗಲಾಟೆ ಮಾಡಿಕೊಂಡಿದ್ದಾರೆ. ಬಾರ್ ಕ್ಯಾಷಿಯರ್ 20 ರೂಪಾಯಿ ಹೆಚ್ಚಿಗೆ ಬಿಲ್ ಹಾಕಿದ ಎಂಬ ಕಾರಣಕ್ಕೆ ಚಾಕು, ಬಾಟಲ್‍ನಿಂದ ಕ್ಯಾಷಿಯರ್ ರಂಜಿತ್ ಎಂಬಾತನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಚಾಕು ಇರಿತವೂ ಆಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಮೂರು ಜನ ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.