ಬೆಂಗಳೂರು ಮೆಟ್ರೋ 2ಎ ಹಂತ, 2ಬಿ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ…

114
firstsuddi

ನವದೆಹಲಿ : ಬೆಂಗಳೂರು ಮೆಟ್ರೋ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಸಿಕ್ಕಿದ್ದು, 58 ಕಿ.ಮೀ ಉದ್ದದ ಮೆಟ್ರೋ ಯೋಜನೆಗೆ 14,788 ಕೋಟಿ ವೆ ವೆಚ್ಚ ಮಾಡಲಾಗುತ್ತಿದೆ ಎಂದು ಪಿಯೂಷ್ ಗೋಯಲ್ ಅವರು ಮಾಹಿತಿ ನೀಡಿದ್ದಾರೆ.

2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆ.ಆರ್. ಪುರಂವರೆಗೆ ಹಾಗೂ 2ಬಿ ಹಂತದಲ್ಲಿ ಕೆ.ಆರ್. ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.