ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ- ಆಸ್ಪತ್ರೆಗೆ ದಾಖಲು…

39
firstsuddi

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್​​ಐ) ಮಹಿಳಾ ಹಾಸ್ಟೆಲ್​ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್​​ನಲ್ಲಿ 29 ವಿದ್ಯಾರ್ಥಿನಿಯರು, ಐವರು ಹೆಚ್ ಬ್ಲಾಕ್​ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಬಿಎಂಸಿಆರ್​​ಐ ಮುಖ್ಯಸ್ಥ ಹಾಗೂ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ ತಿಳಿಸಿದ್ದಾರೆ.

ಒಂದೇ ಹಾಸ್ಟೆಲ್​​ನ 47 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ ಬೆನ್ನಲ್ಲೇ ಕಾಲರಾದ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮಾದರಿಯನ್ನ ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ನಾಳೆ ವಿದ್ಯಾರ್ಥಿನಿಯರ ಪರೀಕ್ಷೆ ವರದಿ ಸಿಗುವ ನಿರೀಕ್ಷೆ ಇದೆ. ಇನ್ನು, ಪ್ರಕರಣದ ಬಳಿಕ ಎಚ್ಚೆತ್ತ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ನ ನೀರನ್ನು ಪರಿಶೀಲಿಸಲು ಸೂಚನೆ ನೀಡಿದೆ.