ಬೆಂಗಳೂರು: ಹಿಟ್ ಅಂಡ್ ರನ್​ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು…

79
firstsuddi

ಬೆಂಗಳೂರು:  ಹಿಟ್ ಅಂಡ್ ರನ್​ಗೆ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ.

ವೇಗವಾಗಿ ಬಂದ ಕಂಟೇನರ್ ಲಾರಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ.

ಘಟನೆ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯ ಪತ್ತೆಗಾಗಿ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ.