ಬೆಂಗಳೂರು : 63 ಲಕ್ಷ ರೂ. ಮೌಲ್ಯದ ನಕಲಿ ಛಾಪಾ ಕಾಗದ ವಶ, ಐವರ ಬಂಧನ…

82
firstsuddi

ಬೆಂಗಳೂರು : ನಕಲಿ ಛಾಪಾ ಕಾಗದ ತಯಾರಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 63 ಲಕ್ಷ ರೂ. ಮೌಲ್ಯದ ನಕಲಿ ಚಾಪಾ ಕಾಗದ ವಶಕ್ಕೆ ಪಡೆಯಲಾಗಿದೆ.

ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್ ಬಂಧಿತರು. ಆರೋಪಿಗಳು 2 ರೂ.ಯಿಂದ 25 ಸಾವಿರ ರೂ. ಮೌಲ್ಯದ ಛಾಪಾ ಕಾಗದದವರೆಗೂ ನಕಲಿ ಮಾಡುತ್ತಿದ್ದರು. ನಕಲಿ ಫಾಂಟ್, ಸೀಲ್ ಹಾಗೂ ಸ್ಕ್ರೀನ್ ಪ್ರಿಂಟಿಂಗ್ ಬಳಸಿ ಛಾಪಾ ಕಾಗದ ಸೃಷ್ಟಿಸುತ್ತಿದ್ದರು. ಅಲ್ಲದೇ ಮೈಸೂರು ಮಹರಾಜರ ಕಾಲದ ರೀತಿಯ ಛಾಪಾ ಕಾಗದಗಳನ್ನು ಕೂಡ ಸೃಷ್ಟಿ ಮಾಡುತ್ತಿದ್ದರು. ಹಳೆಯ ಆಸ್ತಿಗಳನ್ನು ಕಬಳಿಸುವ ಉದ್ದೇಶದಿಂದ ಇಂತಹ ನಕಲಿ ಛಾಪಾ ಕಾಗದ ಸೃಷ್ಟಿಯಾಗುತ್ತಿತ್ತು ಎಂದು ತಿಳಿದು ಬಂದಿದೆ.

 ಹೈಕೋರ್ಟ್ ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್ಐಟಿ ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆದಿದ್ದು, ಕಾರ್ಯಾಚರಣೆ ವೇಳೆ ನಕಲಿ ಛಾಪಾ ಕಾಗದ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.  ಹಳೆಯ ಸ್ಟಾಂಪ್ ಪೇಪರ್, ಹೊಸ ಪೇಪರ್ ಗಳನ್ನೂ ಕೂಡ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.