ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ…

71
firstsuddi

ನವದೆಹಲಿ : ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ವಿಜಯ್ ಚೌಕ್ ಮುಂದೆ ಲೋಕಸಭೆ ಮತ್ತು ರಾಜ್ಯಸಭೆಯ ಕಾಂಗ್ರೆಸ್ ಸದಸ್ಯರು ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು. ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಸದ ರಾಹುಲ್ ಗಾಂಧಿ, ಇಂದು ಕಾಂಗ್ರೆಸ್ ಪಕ್ಷ ದೆಹಲಿ ಸೇರಿದಂತೆ ಪ್ರತಿ ರಾಜ್ಯಗಳಲ್ಲಿ ಪ್ರತಿ ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಕೂಡ ಅಡುಗೆ ಅನಿಲ, ಇಂಧನ ಬೆಲೆ ಏರಿಕೆ ಖಂಡಿಸಿ ಧರಣಿ ನಡೆಸುತ್ತಿದೆ. ಸರ್ಕಾರ ಬೆಲೆ ಏರಿಕೆಗೆ ಕಡಿವಾಣ ಹಾಕುವವರೆಗೆ ಕಾಂಗ್ರೆಸ್ ಪಕ್ಷದ ನಾಯಕರ ಧರಣಿ ಮುಂದುವರಿಯಲಿದೆ ಎಂದು ಹೇಳಿದರು.