ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ…

48
firstsuddi

ಬೆಳಗಾವಿ: ಇತ್ತೀಚೆಗೆ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಮಹಿಳೆ ಮೇಲಿನ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಮಹಿಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಅವರಿಗೆ ದೂರು ನೀಡಿದ್ದಾರೆ.

ಪ್ರಕರಣದ ಹಿನ್ನಲೆ:-
ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದರು. ಮಹಿಳೆಯ ಮಾವ ಜಮೀನಿನಲ್ಲಿ ಮೇವಿನ
ಬಣವಿ ಒಟ್ಟಲು ನೀಡಿದ್ದರು. 6 ಎಕರೆ ಭೂಮಿ ಆಕೆಯ ಮಾವನ ಹೆಸರಿನಲ್ಲಿತ್ತು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ
ತಾಲೂಕಿನ ತಿಗಡಿ ಗ್ರಾಮದಲ್ಲಿ ಈ ಜಮೀನು ಹೊಂದಿದ್ದರು. ಮಹಿಳೆಯನ್ನು ಆರೋಪಿಗಳೆಲ್ಲ ಸೇರಿ ಹೊಡೆದು ಜೀವ
ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ತಿಗಡಿ ಗ್ರಾಮದ ಗ್ರಾಪಂ ಅಧ್ಯಕ್ಷೆ ಪತಿ ಸೇರಿ ಒಟ್ಟು 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಬೈಲಹೊಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗಿದ್ದರೂ ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗಿಲ್ಲ. ಸದ್ಯ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದೆ.