ಬೆಳಗಾವಿ : ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಜಾರಕಿಹೊಳಿ ಬೆಂಬಲಿಗರು…

88
Firstsuddi

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಕಲಿ ಸಿಡಿ ತಯಾರಿಸಿ ಅವರ ತೇಜೋವಧೆ ಮಾಡಲಾಗಿದೆ. ಹೀಗಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಮೂಲಕ ರಮೇಶ್ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಜಾರಕಿಹೊಳಿ ಅವರ ಅಭಿಮಾನಿಗಳು ಗೋಕಾಕ್ ನಲ್ಲಿ ಯರಗಟ್ಟಿ ಸೆಂಕೇಶ್ವರ್ ರಸ್ತೆ ಬಂದ್ ಮಾಡಿ ನಡು ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ನಕಲಿ ಸಿಡಿ ತಯಾರಿಸಿ ಅವರ ರಾಜಕೀಯ ಜೀವನವನ್ನು ಮುಗಿಸಲು ಹುನ್ನಾರ ಮಾಡುತ್ತಿದ್ದಾರೆ. ಹೀಗಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಇಬ್ಬರು ಬೆಂಬಲಿಗರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಆ್ಯಂಬುಲೆನ್ಸ್ ನಲ್ಲಿ ಸಾಗಿಸಿದರು. ಬಳಿಕ ಪೊಲೀಸರು ಪ್ರತಿಭಟನಾ ನಿರತ ಬೆಂಬಲಿಗರ ಮನವೊಲಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.