ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್ – ಏಕಕಾಲಕ್ಕೆ 50ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ…

84
firstsuddi

ಬೆಂಗಳೂರು : ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲಿಯೇ 37 ಕಡೆ ಐಟಿ ದಾಳಿ ನಡೆಸಿದ್ದಾರೆ.

ಗೋವಾ – ಕರ್ನಾಟಕ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ.

ಎಂಬೆಸ್ಸಿ ಗ್ರೂಪ್ ನಿರ್ದೇಶಕ ನರಪತ್ ಸಿಂಗ್ ಚರೋಡಿಯಾ ಮನೆ ಮೇಲೆ ರೇಡ್ ಮಾಡಲಾಗಿದೆ. ಸದಾಶಿವನಗರದ ಎಂಬೆಸ್ಸಿ ಆರ್ಕಿಡ್ ಅಪಾರ್ಟ್ಮೆಂಟ್ ನಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ಧಾರೆ.