ಬೇಲೂರಿನಲ್ಲಿ ಭೀಕರ ಅಪಘಾತ – ಐವರು ವಿದ್ಯಾರ್ಥಿಗಳ ದುರ್ಮರಣ…

132
firstsuddi

ಹಾಸನ : ಕೆಎಸ್​​ಆರ್​ಟಿಸಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.

ಮೃತರನ್ನು ಅಕ್ಮಲ್ ಖಾನ್ (20), ಮಹಮ್ಮದ್ ಜಿಲಾನಿ (20), ಮಹಮದ್ ಕೈಫ್ (20), ಮುಯಿನ್ (22), ರಿಯಾನ್ (22) ಎಂದು ಗುರುತಿಸಲಾಗಿದ್ದು, ಮೃತಪಟ್ಟವರೆಲ್ಲರೂ ಬೇಲೂರು ಪಟ್ಟಣದ ವಿದ್ಯಾವಿಕಾಸ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಈ ವೇಳೆ ಹಾಸನದಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸಾರಿಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.