ಬೇಲೂರು : ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು…

562
firstsuddi

ಬೇಲೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೊಮ್ಮಡಿಹಳ್ಳಿ ಬಳಿ ನಡೆದಿದೆ. ಮೃತರನ್ನು ಮದಘಟ್ಟ ಗ್ರಾಮದ ಅಭಿ(21) ಚಂದನ್(22) ಎಂದು ಗುರುತಿಸಲಾಗಿದ್ದು, ಲಾರಿಯನ್ನು ಓವರ್ ಟೇಕ್ ಮಾಡುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಕೆಳಗೆ ಸಿಲುಕಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬೇಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.