ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ; ತಂದೆ-ಮಗ ಸಾವು…

64
firstsuddi

ರಾಮನಗರ: ಕೆಎಸ್​ಆರ್​ಟಿಸಿ ಬಸ್ ವೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನಕರೆ ಏರಿ ಮೇಲೆ ನಡೆದಿದೆ.

ಸಿದ್ದಪ್ಪ(65), ಅರುಣ(23) ಮೃತ ದುರ್ದೈವಿಗಳು. ಇವರಿಬ್ಬರನ್ನು ತಂದೆ ಮತ್ತು ಮಗ ಎನ್ನಲಾಗಿದೆ. ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.