ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಪೋಟ-ಸವಾರನಿಗೆ ಗಂಭೀರ ಗಾಯ…

166
firstsuddi

ಶಿವಮೊಗ್ಗ : ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೊರಬ ತಾಲ್ಲೂಕಿನ ಕುಪ್ಪಗುಡ್ಡ ಗ್ರಾಮದ ಕೆರೆ ಬಳಿ ನಡೆದಿದೆ. ಶರತ್(22) ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಶರತ್ ಹಾಗೂ ಅವರ ಸ್ನೇಹಿತ ಇಬ್ಬರು ಬೈಕಿನಲ್ಲಿ ತವನಂದಿ ಗ್ರಾಮದಿಂದ ಕುಪ್ಪಗುಡ್ಡೆಗೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡಿದ್ದು, ಶರತ್‍ನ ಬಲ ತೊಡೆಗೆ ಗಂಭೀರ ಗಾಯಗಳಾಗಿವೆ. ಮೊಬೈಲ್ ಸ್ಪೋಟಗೊಳ್ಳುತ್ತಿದ್ದಂತೆ ಗಾಬರಿಗೊಂಡ ಯುವಕರು ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದ್ದು, ಬಳಿಕ ಕೂಡಲೇ ಜೊತೆಯಲ್ಲಿದ್ದ ಸ್ನೇಹಿತ ಗಾಯಗೊಂಡ ಯುವಕನನ್ನು ಸೊರಬ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆನವಟ್ಟಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.