ಬೈಕ್-ಕಾರು ನಡುವೆ ಮುಖಾಮುಖಿ ಡಿಕ್ಕಿ ; ದಂಪತಿ ಸಾವು…

58
firstsuddi

ಹಾಸನ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗೀಹಳ್ಳಿ ಗೇಟ್ ಬಳಿ ನಿನ್ನೆ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ತೋಟಿ ಗ್ರಾಮದ ಸುನೀಲ್ ಹಾಗೂ ಪತ್ನಿ ದಿವ್ಯಾ ಸಾವನ್ನಪ್ಪಿರುವ ದಂಪತಿ. ಹೊಸ ವರ್ಷದ ಹಿನ್ನೆಲೆ ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಬೈಕ್ ನಲ್ಲಿ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಸುನೀಲ್ ಸ್ಥಳದಲ್ಲೇ ಮೃತಪಟ್ಟರೆ, ದಿವ್ಯಾ ಹಾಗೂ ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ದಿವ್ಯಾ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಮಕ್ಕಳಲ್ಲಿ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.