ಬೈಕ್ – ಬಸ್ ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು…

130
firstsuddi

ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ನಡೆದಿದೆ.

ಮೃತರನ್ನು ಭುವನಹಳ್ಳಿ ಗ್ರಾಮದ ಶಕುಂತಲಾ (40) ಎಂದು ಗುರುತಿಸಲಾಗಿದೆ . ಶಕುಂತಲಾ ತಮ್ಮ ಪತಿಯೊಂದಿಗೆ ಬೈಕ್ ನಲ್ಲಿ ಏರ್‌ಪೋರ್ಟ್ ಗೆ ಕೆಲಸಕ್ಕಾಗಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನ ಹಿಂಬದಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೃತ ಶಕುಂತಲಾ ಪತಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಏರ್‌ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.