ಬೊಲೆರೋ ಗಿಫ್ಟ್ ನೀಡಿ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಆನಂದ್ ಮಹೀಂದ್ರಾ.

72
firstsuddi

ಮುಂಬೈ : ಕಿಕ್-ಸ್ಟಾರ್ಟಿಂಗ್ ಜೀಪ್ ತಯಾರಿಸಿದ ಬಡ ಪ್ರತಿಭೆಗೆ ಮಹೀಂದ್ರಾ ಕಂಪನಿ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬೊಲೆರೋ ಕಾರು ಗಿಫ್ಟ್ ನೀಡುವ ಮೂಲಕ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.

ಮಹಾರಾಷ್ಟ್ರ ಮೂಲದ ದತ್ತಾತ್ರೇಯ ಲೋಹರ್ ಎಂಬ ವ್ಯಕ್ತಿ ಹಳೆಯ ವಾಹನದ ಬಿಡಿ ಭಾಗಗಳನ್ನ ಬಳಸಿ, ದ್ವಿ-ಚಕ್ರ ವಾಹನ ಸಿದ್ಧಪಡಿಸಿದ್ದರು. ಇದಕ್ಕಾಗಿ 60 ಸಾವಿರ ರೂ. ಖರ್ಚು ಮಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನ ಶೇರ್ ಮಾಡಿಕೊಂಡಿದ್ದ ಮಹೀಂದ್ರಾ ಕಂಪನಿ ಎಂಡಿ ಆನಂದ್ ಮಹೀಂದ್ರಾ, ನಮ್ಮ ಜನರ ಜಾಣ್ಮೆ ಮತ್ತು ಕನಿಷ್ಠ ಸಂಪನ್ಮೂಲಗಳನ್ನು ನಾನು ಪ್ರಶಂಸಿಸುತ್ತೇನೆ. ಹೆಚ್ಚು ಹೆಚ್ಚು ಸಾಮರ್ಥ್ಯಗಳನ್ನು ಪ್ರೋತ್ಸಾಹಿಸುವುದನ್ನು ಮುಂದುವರಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದರ ಜೊತೆಗೆ ಹಳೆಯ ವಾಹನದ ಬದಲಾಗಿ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ದತ್ತಾತ್ರೇಯ ಅವರಿಗೆ ಹೊಸ ಕಾರು ನೀಡಿದ್ದಾರೆ.