ಕೋಲಾರ : ಬೊಲೆರೋ, ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಂದೆ, ಮಗ ಸಾವನ್ನಪ್ಪಿರುವ ಘಟನೆ ನಗರದ ಮಾಲೂರು ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ನಡೆದಿದ್ದು, ಮೃತರನ್ನು ಚಿಕ್ಕಬಳ್ಳಾಪುರ ಮೂಲದ ಹನುಮಂತು (45) ಹಾಗು ಭುವನ್ (12) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನಿನ್ನೆ ತೊರಹಳ್ಳಿಯ ಮಾವನ ಮನೆಗೆ ಬಂದು ಬೆಳಗ್ಗೆ ಬಂಗಾರಪೇಟೆ ಶುಕ್ರವಾರದ ಸಂತೆಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಮಗ ಹಾಗೂ ಜೊತೆಯಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










