ಭಕ್ತರೇ ಗಮನಿಸಿ..ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ…

95
firstsuddi

ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಇಂದಿನಿಂದ(ಸೆಪ್ಟಂಬರ್.4) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.

ಕೇರಳ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.