ಛತ್ತೀಸ್ಘಡ : ಭದ್ರತಾ ಸಿಬ್ಬಂಧಿಗಳ ನಡುವೆ ನಡೆದ ಘರ್ಷಣೆಯಲ್ಲಿ 6ಮಂದಿ ಯೋಧರು ಮೃತಪಟ್ಟಿರುವ ಘಟನೆ ನಾರಾಯಣಪುರ ಕ್ಯಾಂಪ್ನಲ್ಲಿ ನಡೆದಿದೆ. ನಕ್ಸಲ್ ಪೀಡಿತ ಪ್ರದೇಶವಾಗಿದ್ದ ನಾರಾಯಣಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಟಿಬಿಪಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಯೋಧರು AK-47 ನಿಂದ ಮನಬಂದಂತೆ ಒಬ್ಬರ ಮೇಲೊಬ್ಬರು ಗುಂಡು ಹಾರಿಸಿದ್ದಾರೆ. ಈ ವೇಳೆ ಗುಂಡು ತಗುಲಿ 6ಮಂದಿ ಯೋಧರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವ ಕಾರಣಕ್ಕೆ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ ಎಂದು ತಿಳಿದು ಬಂದಿಲ್ಲ.










