ಭಯೋತ್ಪಾದಕ ಸಂಘಟನೆ ಜೊತೆ ನಂಟು ಶಂಕೆ ; ಜಮ್ಮು-ಕಾಶ್ಮೀರದಲ್ಲಿ ಎನ್‍ಐಎ ದಾಳಿ…

62
firstsuddi

ಶ್ರೀನಗರ : ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಲ್ಲದೇ, ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಗೆ ಸೇರಿದ ಹಲವು ಸ್ಥಳಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ತಂಡ ದಾಳಿ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿರುವ ಟ್ರಸ್ಟ್ ನ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿರುವ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದು, ಅದರ ಅನುಮಾನಾಸ್ಪದ ಚಟುವಟಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ದೇಶದ 15 ರಾಜ್ಯಗಳಲ್ಲಿ 93 ಕಡೆ ದಾಳಿ ನಡೆಸಿ ನೂರಾರು ಪಿಎಫ್ಐ ಕಾರ್ಯಕರ್ತರು, ಮುಖ್ಯಸ್ಥರನ್ನು ಎನ್ಐಎ ಬಂಧಿಸಿತ್ತು.