ಭರ್ಜರಿ ಶತಕ ಸಿಡಿಸಿ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ.

37

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್‍ಗಳನ್ನು ಪಡೆದು ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾದ ಪರ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಸೆಂಚುರು ಭಾರಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ. ಮೆಲ್ಬೋರ್ನ್‍ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚುತ್ತಿದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಅಂಕಣಕಿಳದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕವನ್ನು ಪೂರೈಸಿದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್‍ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮವಾದ ಆರಂಭವನ್ನು ಪಡೆದಿರಲಿಲ್ಲ. ಆರಂಭಿಕವಾಗಿ ಅಂಕಣಕಿಳಿದ ರೋಹಿತ್ ಶರ್ಮಾ ಕೇವಲ ಮೂರು ರನ್‍ಗಳಿಸಿ ಔಟಾ ಆಗಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್‍ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಅಂಕಣಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಉತ್ತಮವಾದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯಮಾಯಿತು. ಹಾಫ್ ಸೆಂಚುರಿಯ ನಂತರ ಆಸೀಸ್ ಬೌಲರ್‌ಗಳನ್ನು ಕಾಡಿದ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ತಿಳಿಸಲಾಗಿದೆ.