ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿದ್ದ ಬಾಂಗ್ಲಾ ದೇಶದ ಮಹಿಳೆ ಅರೆಸ್ಟ್…

61
firstsuddi

ಬೆಂಗಳೂರು : ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದು ಹಿಂದೂ ಹೆಸರಿಟ್ಟುಕೊಂಡು ಭಾರತೀಯ ಸಾರ್ವಭೌಮತ್ವ ಪಡೆದಿದ್ದ ಬಾಂಗ್ಲಾ ದೇಶದ ಮುಸ್ಲಿಂ ಮಹಿಳೆಯೊಬ್ಬಳನ್ನು ಬ್ಯಾಡರಹಳ್ಳಿ ಪೊಲೀಸರು ಪತ್ತೆ ಹಚ್ಚಿ, ಬಂಧಿಸಿದ್ದಾರೆ.

2006 -2007 ರಲ್ಲಿ ಅಕ್ರಮವಾಗಿ ಭಾರತದ ಗಡಿ ನುಸುಳಿದ್ದ ರೋನಿ ಬೇಗಂ 2015 ರಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದಳು. ಅವಳು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದಳು. ನಿತೀನ್ ಕುಮಾರ್ ಎಂಬಾತನನ್ನು ಬಾಂಬೆಯಲ್ಲಿ ವಿವಾಹವಾಗಿದ್ದ ಮಹಿಳೆ ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಹೆಸರು ಬದಲಿಸಿಕೊಂಡು ಪಾಯಲ್ ಗೋಷ್ ಎಂದು ಮರು ನಾಮಕರಣ ಮಾಡಿಕೊಂಡಿದ್ದಳು.

ನಕಲಿ ದಾಖಲೆ ಕೊಟ್ಟು ಭಾರತ ಪ್ರಜೆಯಾಗಿ ದಾಖಲೆ ಮಾರ್ಪಾಡು ಮಾಡಿಕೊಂಡಿದ್ದ ರೋನಿ, ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳ ಕೈಗೆ ಲಾಕ್ ಆಗಿದ್ದಳು. 2020ರಲ್ಲಿ ವೆಸ್ಟ್ ಬೆಂಗಾಲ್ ಏರ್ ಪೋರ್ಟ್ ನಲ್ಲಿ ಇಮಿಗ್ರೇಷನ್ ಅಧಿಕಾರಿಗಳ ತಪಾಸಣೆ ವೇಳೆ ಲಾಕ್ ಆಗಿದ್ದ ರೋನಿ, ನಕಲಿ ದಾಖಲೆ ಮುಖಾಂತರ ಓಟರ್ ಐಡಿ ಹಾಗೂ ಆಧಾರ್ ಕಾರ್ಡ್ ಕ್ರಿಯೇಟ್ ಮಾಡಿ ಪಾಸ್ ಪೋರ್ಟ್ ಮಾಡಿಸಿರುವುದು ಬೆಳಕಿಗೆ ಬಂದಿದೆ.

ಈ ವಿಚಾರವಾಗಿ ಎಫ್ ಆರ್ ಆರ್ ಒ ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೂವರೆ ವರ್ಷದ ನಂತರ ರೋನಿ ಬೇಗಂ ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮಹಿಳೆಗೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.