ಭಾರತದ ಮಹಿಳಾ ಖುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಕೊರೊನಾ ಸೋಂಕು…

182
firstsuddi

ನವದೆಹಲಿ : ಭಾರತದ ಮಹಿಳಾ ಖುಸ್ತಿಪಟು ಹಾಗೂ 2020ರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತೆ ವಿನೇಶ್ ಫೋಗಟ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ತಾವೇ ತಮ್ಮ ಟ್ವಿಟರ್ ಖಾತೆಯ ಮೂಲಕ ತಿಳಿಸಿದ್ದು, “ಕೊರೊನಾ ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಬಂದಿದೆ. ನನಗೆ ಕೊರೊನಾ ಸೋಂಕಿನ ಲಕ್ಷಗಳು ಯಾವುದು ಇಲ್ಲ. ಆದರೂ ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನನ್ನ ಕುಂಬಸ್ಥರೂ ಕೂಡಾ ಐಸೋಲೇಷನ್ ಆಗಿದ್ದಾರೆ. ಇತ್ತೀಚೆಗೆ ನನ್ನ ಸಂಪರ್ಕಕಕ್ಕೆ ಬಂದ ಎಲ್ಲರೂ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ವಿನೇಶ್ ಫೋಗಟ್ ಅವರಿಗೆ ಕೊರೊನಾ ಸೋಂಕು ತಗುಲಿರುವುದರಿಂದ 2020ನೇ ಸಾಲಿನ ಖೇಲ್ ರತ್ನ ಪ್ರಶಸ್ತಿ ಕಾರ್ಯಕ್ರಮ ಇಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅವರಿಗೆ ಭಾಗವಹಿಸಲು ಸಾಧ್ಯವಿಲ್ಲ. ಇವರು ವಿಶ್ವಚಾಂಪಿಯನ್ ಪಂದ್ಯದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.