ಭಾರತೀಯ ಯೋಧರೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಎಂ.ಎಸ್. ಧೋನಿ…

239
firstsuddi

ಲಡಾಖ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಎಂ.ಎಸ್. ಧೋನಿ ಅವರು 73ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಲಡಾಖ್‍ನಲ್ಲಿ ಭಾರತೀಯ ಯೋಧರೊಂದಿಗೆ ಆಚರಿಸಿಕೊಂಡಿದ್ದಾರೆ. ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಡ್‍ನ ಟೆರಿಟೊರಿಯಲ್ ಆರ್ಮಿ ಯೂನಿಟ್‍ನಲ್ಲಿ 2011ರಲ್ಲಿ ಗೌರವ ಲೆಷ್ಟಿನೆಂಟ್ ಕರ್ನಲ್ ಹುದ್ದೆಗೆ ಸೇರಿಕೊಂಡಿರುವ ಧೋನಿ ಅವರು ಕಳೆದ 15 ದಿನದಿಂದ ಜಮ್ಮು ಕಾಶ್ಮೀರದಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವೇಳೆ ಲಡಾಖ್‍ನಲ್ಲಿ ಭಾರತೀಯ ಯೋಧರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ.