ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ನಟಿ ಪೂಜಾ ಭಟ್ ಸಾಥ್…

56
firstsuddi

ಹೈದರಾಬಾದ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 56ನೇ ದಿನಕ್ಕೆ ಕಾಲಿಟ್ಟಿದೆ. ಸದ್ಯ ಯಾತ್ರೆ ಹೈದರಾಬಾದ್ ನಗರದಲ್ಲಿ ಸಂಚರಿಸುತ್ತಿದ್ದು, ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕುವ ಮೂಲಕ ಸಾಥ್ ನೀಡಿದರು.

ಬಾಲಿವುಡ್ ನಟಿ ಪೂಜಾ ಭಟ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತಾ ಅವರೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಂಡಕೂಡಲೇ ಜನರು ಹರ್ಷೋದ್ಗಾರ ಮಾಡಿದರು. ಪೂಜಾ ಭಟ್ ಅವರು 1989 ರ ಚಲನಚಿತ್ರ “ಡ್ಯಾಡಿ” ಮೂಲಕ ನಟಿಯಾಗಿ ಪಾದಾರ್ಪಣೆ ಮಾಡಿದರು.