ಭಾರತ್ ಜೋಡೋ ಯಾತ್ರೆ ವೇಳೆ ಕೆ.ಸಿ.ವೇಣುಗೋಪಾಲ್ ಕೈ, ಮೊಣಕಾಲಿಗೆ ಗಾಯ…

83
firstsuddi

ಭೋಪಾಲ್ : ಮಧ್ಯಪ್ರದೇಶದ ಇಂದೋರ್ ನಲ್ಲಿ ನಿನ್ನೆ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ಮಧ್ಯಪ್ರದೇಶದ ಇಂದೋರ್ ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಕೂಡಲೇ ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ.

ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.