ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ-ಬಾಲಕಿ ಸಾವು…

160
firstsuddi

ಚಿತ್ರದುರ್ಗ : ಭಾರಿ ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಸೌಜನ್ಯ(6) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮೃತ ಬಾಲಕಿ ನಿನ್ನೆ ತನ್ನ ತಂದೆ ತಾಯಿಯೊಂದಿಗೆ ಮಲಗಿದ್ದ ವೇಳೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದಿದ್ದು, ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕಿಯ ತಂದೆ-ತಾಯಿ ಹಾಗೂ ಅಣ್ಣ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪರಶುರಾಂಪುರ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.