ಭಾರೀ ಮಳೆ ; ಮನೆ ಗೋಡೆ ಕುಸಿದು ಮೂವರು ದುರ್ಮರಣ…

62
firstsuddi

ರಾಯಚೂರು : ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಐದು ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಮಾನವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.

ಪರಮೇಶ (45) , ಪರಮೇಶ್ ಪತ್ನಿ ಜಯಮ್ಮ (39) ಹಾಗೂ ಐದು ವರ್ಷದ ಭರತ್ ಮೃತ ದುರ್ದೈವಿಗಳು. ಮನೆಯಲ್ಲಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಅವಘಡ ಸಂಭವಿಸಿದೆ. ಪರಮೇಶ್ ಹಾಗೂ ಜಯಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಾಲಕ ಭರತ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾನೆ.

ಘಟನೆ ಹಿನ್ನೆಲೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.