ಭೀಕರ ಕಾರು ಅಪಘಾತ – ಇಬ್ಬರು ಸಾವು, ಐವರು ಗಂಭೀರ…

60
firstsuddi

ದಾವಣಗೆರೆ: ಸಂಬಂಧಿಕರ ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುವಾಗ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ನಿವಾಸಿಗಳಾದ ಅರುಣ್ ಶೆಟ್ಟರ್ (50) ಹಾಗೂ ತಾಯಿ ವಿಜಯಲಕ್ಷ್ಮಿ ಶೆಟ್ಟರ್ (70) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕುಟುಂಬಸ್ಥರೆಲ್ಲಾ ಸೇರಿ ಮದುವೆಗೆಂದು ತುಮಕೂರಿಗೆ ಹೋಗಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭ ದಾವಣಗೆರೆ ಬಳಿಯ ಶಿರಮಗೊಂಡನಹಳ್ಳಿ ಸೇತುವೆ ಮೇಲೆ ವೇಗವಾಗಿ ಬಂದ ಕಾರ್ ಟ್ರಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ದಾವಣಗೆರೆ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.