ಡೆಹ್ರಾಡೂನ್ : ಭಾರತ ತಂಡದ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ದೆಹಲಿಯಿಂದ ಮನೆಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ. ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪ್ಲಾಸ್ಟಿಕ್ ಸರ್ಜರಿಯ ಅವಶ್ಯಕತೆ ಇರುವುದಾಗಿ ವರದಿಯಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ಹೇಳಿದ್ದಾರೆ.










