ಭೀಕರ ರಸ್ತೆ ಅಪಘಾತ ; ಏಳು ಮಂದಿ ಸ್ಥಳದಲ್ಲೇ ಸಾವು…

60
firstsuddi

ಧಾರವಾಡ : ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬಾಡ ಗ್ರಾಮದ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಅನನ್ಯಾ(14) ಹರೀಶ(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11) ಹಾಗೂ ಶಂಭುಲಿಂಗಯ್ಯ(35) ಅಂತ ಗುರುತಿಸಲಾಗಿದೆ. ಮೃತರೆಲ್ಲರೂ ತಾಲೂಕಿನ ಬೆನಕಟ್ಟಿ ಗ್ರಾಮದವರೆಂದು ಮಾಹಿತಿ ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಮನಸೂರ ಗ್ರಾಮದಿಂದ ಬೆನಕನಕಟ್ಟಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಕ್ರೂಸರ್ ವಾಹನದಲ್ಲಿ ಸುಮಾರು 21 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.