ಚಿಕ್ಕಬಳ್ಳಾಪುರ: ಕಾರು ಮತ್ತು ಟಾಟಾ ಏಸ್‌ನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟಾಟಾ ಏಸ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಾಳುವಿಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ 112 ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.