ಮೈಸೂರು: ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ನಿಲುವಾಗಿಲು ಗ್ರಾಮ ಪಂಚಾಯಿತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, ಕಾರಿನಲ್ಲಿದ್ದ ಭಾಸ್ಕರ್ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










