ಭೀಕರ ರಸ್ತೆ ಅಪಘಾತ ; 10 ಮಂದಿ ಯಾತ್ರಿಕರು ಸಾವು…

19
firstsuddi

ಉತ್ತರ ಪ್ರದೇಶ : ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಹತ್ತು ಮಂದಿ ಯಾತ್ರಿಕರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಹರಿದ್ವಾರದಿಂದ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ 7 ಮಂದಿ ಗಾಯಗೊಂಡಿದ್ದಾರೆ.

ಐವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇಬ್ಬರನ್ನು ಬರೇಲಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಖರೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.