ಭೂಕಂಪ ಪೀಡಿತ ಜಪಾನ್​ನಿಂದ ಸುರಕ್ಷಿತವಾಗಿ ವಾಪಸಾದ ಜ್ಯೂ.ಎನ್​ಟಿಆರ್.

57
firstsuddi

ಹೊಸ ವರ್ಷದ ಮೊದಲ ದಿನವೇ ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮಧ್ಯೆಯೇ, ಜೂನಿಯರ್ ಎನ್​ಟಿಆರ್ ಅವರು ಕ್ರಿಸ್​​ಮಸ್ ಹಬ್ಬದ ಸಂದರ್ಭದಲ್ಲಿ ಜಪಾನ್ ಪ್ರವಾಸಕ್ಕೆ ತೆರಳಿದ್ದರು. ಭೂಕಂಪ ಆಗುವ ಸಮಯದಲ್ಲಿಯೂ ಅವರು ಅಲ್ಲಿಯೇ ಇದ್ದರು. ಭೂಕಂಪದ ಸುದ್ದಿ ಕೇಳುತ್ತಿದ್ದಂತೆಯೇ ಜ್ಯೂನಿಯರ್ ಎನ್​ಟಿಆರ್ ಫ್ಯಾನ್ಸ್ ಶಾಕ್​ಗೆ ಒಳಗಾಗಿದ್ದರು. ಇದೀಗ ಭಾರತಕ್ಕೆ ಸುರಕ್ಷಿತವಾಗಿ ವಾಪಸಾಗಿರುವ ನಟ, ತಾವು ಸೇಫ್ ಆಗಿ ವಾಪಸಾಗಿರುವುದಾಗಿ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್ ಎಂದು ಜ್ಯೂ.ಎನ್​ಟಿಆರ್ ಬರೆದುಕೊಂಡಿದ್ದಾರೆ.

ಸದ್ಯ ಜ್ಯೂನಿಯರ್ ಎನ್​ಟಿಆರ್ ಅವರು ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ.