ಭ್ರಷ್ಟಾಚಾರ ಆರೋಪ – ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ದಾಳಿ…

58
firstsuddi

ಬೆಂಗಳೂರು : ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ. ಬಿಬಿಎಂಪಿ ಮುಖ್ಯ ಕಚೇರಿ ಹಾಗೂ ನಗರದ ಎಲ್ಲಾ ಬಿಬಿಎಂಪಿ ವಲಯ ಕಚೇರಿಗಳ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ನಾಲ್ವರು ಎಸ್ ಪಿಗಳು, ಡಿವೈಎಸ್ ಪಿಗಳು, ಇನ್ಸ್ ಪೆಕ್ಟರ್ ಗಳು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ಮೊದಲು ಬಿಡಿಎ ಮೇಲೆ ಎಸಿಬಿ ದಾಳಿ ಮಾಡಿತ್ತು. ಇದೀಗ ಬಿಬಿಎಂಪಿ ಕಚೇರಿ ಮೇಲೂ ಎಸಿಬಿ ದಾಳಿ ನಡೆಸಿದೆ.